ಹಾವೇರಿ:- ಜನವರಿ 18 ಹಾಗೂ 19ರಂದು ಬೆಂಗಳೂರಿನಲ್ಲಿ ನಡೆಯುವ ಬ್ರಾಹ್ಮಣ ಮಹಾಸಮ್ಮೇಳನಕ್ಕೆ ಹಾವೇರಿ ಜಿಲ್ಲೆಯಿಂದ ಜಿಲ್ಲೆಯಿಂದ ಅಂದಾಜು 2,500 ಮಂದಿ ಸಮಾಜದವರು ಪಾಲ್ಗೊಳ್ಳಲಿದ್ದಾರೆ’ ಎಂದು ಹಾವೇರಿ ಜಿಲ್ಲಾ ಬ್ರಾಹ್ಮಣ ಸಮಾಜದ ಜಿಲ್ಲಾಧ್ಯಕ್ಷರಾದ ಶ್ರೀ ವಸಂತ ಮೊಕ್ತಾಲಿ ಹೇಳಿದರು.

ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಮಾತನಾಡಿದ ಅವರು, ‘ಮಹಾಸಭಾದ ಜಿಲ್ಲಾ ಘಟಕದಿಂದ ರೈಲು ವ್ಯವಸ್ಥೆ ಮಾಡಲಾಗಿದ್ದು ರಾಜ್ಯದ ವಿವಿಧ ಜಿಲ್ಲೆಗಳಿಂದ 1 ಲಕ್ಷಕ್ಕೂ ಹೆಚ್ಚು ಮಂದಿ ಭಾಗವಹಿಸುವರು. ಬ್ರಾಹ್ಮಣ ಸಮಾಜ ಸಂಘಟಿತವಾಗಿದ್ದು, ಯಾರೇ ಅಪಮಾನ ಮಾಡಿದರೂ ಖಂಡಿಸಲಿದೆ ಎಂಬ ಸಂದೇಶ ರವಾನಿಸಲಾಗುವುದು’ ಎಂದರು.
ದಿವ್ಯ ಸಾನಿಧ್ಯವನ್ನು ವಹಿಸಿದ್ದ ಅಗಡಿ ಆನಂದ ವನದ ಪರಮಪೂಜ್ಯಶ್ರೀ ಗುರುದತ್ತ ಮೂರ್ತಿ ಚಕ್ರವರ್ತಿ ಸ್ವಾಮೀಜಿಗಳು ಮಾತನಾಡಿ ಸಂಸ್ಕಾರ-ಸಂಘಟನೆ- ಸ್ವಾವಲಂಬನೆ ಎಂಬ ದೇವಾಕ್ಯದೊಂದಿಗೆ ಸನಾತನ ಹಿಂದೂ ಧರ್ಮದ ಸಂಸ್ಕೃತಿ ಮತ್ತು ಪರಂಪರೆಯ ರಕ್ಷಣೆಯಲ್ಲಿ ಮಹಾಸಭೆಯು ಮಹತ್ವದ ಪಾತ್ರವನ್ನು ವಹಿಸುತ್ತಾ ಬಂದಿದೆ. 1974ರಲ್ಲಿ ಅಧಿಕೃತವಾಗಿ ನೋಂದಣಿಯಾದ ಸಂಸ್ಥೆಯಾಗಿ ಹೊರಹೊಮ್ಮಿದ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಈಗ 50 ವರ್ಷಗಳು ಗತಿಸಿರುವುದು ಹೆಮ್ಮೆಯ ಸಂಗತಿ. ಜಿಲ್ಲೆಯ ಸಮಸ್ತ ವಿಪ್ರ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಇದೆ ತಿಂಗಳ 18 ಮತ್ತು 19ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುವ ಬೃಹತ್ ಸಮಾವೇಶಕ್ಕೆ ನಾವೆಲ್ಲಭಾಗಿಯಾಗೋಣ ಎಂದರು.
ಸಮ್ಮೇಳನ ಸಮಿತಿಯ ರಾಜ್ಯ ಪ್ರಧಾನ ಸಂಚಾಲಕರಾದ ಶ್ರೀ ವಿಜಯ ನಾಡಜೋಶಿ ರವರು ಮಾತನಾಡಿ,
ಬೆಂಗಳೂರಿನ ಅರಮನೆ ಮೈದಾನದಲ್ಲಿರುವ ತ್ರಿಪುರವಾಸಿನಿ ಸಭಾಂಗಣದಲ್ಲಿ ಜ.17ರಂದು ಪೂಜೆ, ಯಾಗ, ಕಳಸ ಸ್ಥಾಪನೆ ಜರುಗಲಿದೆ. 18ರಂದು ಶೃಂಗೇರಿ ಶಾರದಾಪೀಠದ ವಿಧುಶೇಖರ ಭಾರತೀ ಸ್ವಾಮೀಜಿ ನೇತೃತ್ವದಲ್ಲಿ ಧಾರ್ಮಿಕ ಕಾರ್ಯಗಳು ನಡೆಯಲಿದ್ದು, ವಿವಿಧ ಸ್ವಾಮೀಜಿಗಳು ಸಾನ್ನಿಧ್ಯ ವಹಿಸುವರು. ಸಭಾ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವರಾದ ರಾಜನಾಥ್ ಸಿಂಗ್, ನಿತಿನ್ ಗಡ್ಕರಿ, ಪ್ರಲ್ಲಾದ ಜೋಶಿ, ಎಚ್.ಡಿ. ಕುಮಾರಸ್ವಾಮಿ, ರಾಜಸ್ಥಾನ ಮುಖ್ಯಮಂತ್ರಿ ಭಜನ್‌ಲಾಲ್ ಶರ್ಮಾ, ರಾಜ್ಯದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೇರಿದಂತ ವಿವಿಧ ಗಣ್ಯರು ಪಾಲ್ಗೊಳ್ಳುವರು’ ಹಾಗೂ ‘ಪಾಣಿಗ್ರಹಣ ವೇದಿಕೆ ಉದ್ಘಾಟನೆ, ಸ್ಮರಣ ಸಂಚಿಕೆ ಹಾಗೂ ಹಲವು ಕೃತಿಗಳನ್ನು ಬಿಡುಗಡೆ ಮಾಡಲಾಗುತ್ತದೆ. ಬ್ರಹ್ಮತೇಜ ಪ್ರಶಸ್ತಿ ಪ್ರದಾನ, ಉತ್ತರಾದಿಮಠದ 1008 ಸತ್ಯಾತ್ಮತೀರ್ಥ ಸ್ವಾಮೀಜಿ ಆಶೀರ್ವಚನ, ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದೆ’
ಮರು ದಿನ 19ರಂದು ವಿಚಾರಗೋಷ್ಠಿ ಹಮ್ಮಿಕೊಳ್ಳಲಾಗಿದೆ. ಸಭಾ ಕಾರ್ಯಕ್ರಮದಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್, ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವೆ ಶೋಭಾ ಕರಂದ್ಲಾಜೆ, ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಮೊದಲಾದವರು ಹಾಜರಿರುವರು. ವಿವಿಧ ಮಠಾಧೀಶರು ಸಾನ್ನಿಧ್ಯ ವಹಿಸುವರು. ಹೈಕೋರ್ಟ್ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅಧ್ಯಕ್ಷತೆ ವಹಿಸುವರು. ಸಾಂಸ್ಕೃತಿಕ ಕಾರ್ಯಕ್ರಮ, ವಾಣಿಜ್ಯ ಸಮಾವೇಶ ಜರುಗಲಿದೆ’ ಎಂದು ವಿವರಿಸಿದರು.
ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ವು ಉತ್ತರ ಕರ್ನಾಟಕದ ಹೆಬ್ಬಾಗಿಲಾದ ಹಾವೇರಿ ನಗರದಲ್ಲಿ 11.30ಗುಂಟೆ ಸಾರ್ವಜನಿಕ ನಿವೇಶನವನ್ನು ನಗರದ ಅಜ್ಜಯ್ಯನ ದೇವಸ್ಥಾನದ ಬಳಿ ನೀಡಿರುವುದು ಹೆಮ್ಮೆಯ ಸಂಗತಿಯಾಗಿದೆ. ಮಹಾಸಭಾದ ರಾಜ್ಯಾಧ್ಯಕ್ಷರಾದ ಶ್ರೀ ಅಶೋಕಹಾರ್ನಳ್ಳಿ ಅವರಿಗೆ ಹಾವೇರಿ ಜಿಲ್ಲೆಯ ಸಮಸ್ತ ವಿಪ್ರ ಬಾಂಧವರಿಂದ ವಿಶೇಷ ಕೃತಜ್ಞತೆಗಳೊಂದಿಗೆ ಧನ್ಯವಾದಗಳು ಅರ್ಪಿಸುತ್ತೇವೆ ಹಾಗೂ ಹಾವೇರಿ ಹಾಗೂ ಉತ್ತರ ಕರ್ನಾಟಕದ ಜಿಲ್ಲೆಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಅಧ್ಯಕ್ಷರು ತೆಗೆದುಕೊಂಡ ನಿರ್ಣಯ ಹಾಗೂ ತೋರಿರುವ ವಿಶೇಷ ಪ್ರೀತಿ ಮತ್ತು ಕಾಳಜಿಗೆ ವಿಪ್ರಬಾಂಧವರು ಸದಾ ಚಿರಋಣಿಯಾಗಿರುತ್ತವೆ
ಎಂದು ಸಮ್ಮೇಳನ ಸಮಿತಿಯ ರಾಜ್ಯ ಪ್ರಧಾನ ಸಂಚಾಲಕರಾದ ಶ್ರೀ ವಿಜಯ ನಾಡಜೋಶಿ ಅವರು ಹೇಳಿದರು.
ಸುವರ್ಣ ಸಂಭ್ರಮ ಸಮಾರಂಭದಲ್ಲಿ ಹಾವೇರಿ ಜಿಲ್ಲೆಯ ಇಬ್ಬರಿಗೆ ಸಂದ ಪ್ರಶಸ್ತಿ ಗಳು
ಹಾವೇರಿ ತಾಲೂಕು ಅಗಡಿ ಆನಂದವನದ ಶ್ರೀ ಶೇಷಾಚಲ ಸದ್ಗುರು ವೇದ ಸಂಸ್ಕೃತ ಪಾಠ ಶಾಲೆಯ ನಿವೃತ್ತ ಅಧ್ಯಾಪಕರಾದ ಶ್ರೀ ಶಂಕರ್ ಭಟ್ ನಾಗೇಶ್ ಭಟ್ಟ ಜೋಶಿ ಅವರಿಗೆ ಸುವರ್ಣ ಸಂಭ್ರಮದ ವಿಪ್ರ ಮಹಾ ಸಮ್ಮೇಳನ ದಲ್ಲಿ ಅವರು ಸನಾತನ ಧರ್ಮಕ್ಕೆ ಹಾಗೂ ವಿಪ್ರ ಸಮಾಜಕ್ಕೆ ಕೊಟ್ಟಿರುವ ಕೊಡುಗೆಯನ್ನು ಗುರುತಿಸಿ, ಬ್ರಹ್ಮತೇಜ ಪ್ರಶಸ್ತಿಯನ್ನು ನೀಡಿ ಗೌರವಿಸಲಿದ್ದಾರೆ .
ಹಾಗೆಯೇ
ಹಾವೇರಿ ನಗರದ ಯುವ ಉದ್ಯಮಿಗಳಾದ ಪವನ್ ಬಹದ್ದೂರ್ ದೇಸಾಯಿ ರವರಿಗೆ ನಮ್ಮವರು ನಮ್ಮ ಹೆಮ್ಮೆ ಎಂಬ ಪುರಸ್ಕಾರ ನೀಡಿ ಗೌರವಿಸಲಾಗುವುದು ಎಂದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಒಂದು ಪತ್ರಿಕಾ ಗೋಷ್ಟಿ ಯಲ್ಲಿ ಸಮ್ಮೇಳನ ಸಮಿತಿಯ ರಾಜ್ಯ ಉಪಾಧ್ಯಕ್ಷರಾದ
ಶ್ರೀ ಪವನ್ ಬಹದ್ದೂರ್ ದೇಸಾಯಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗಳಾದ ಶ್ರೀ ಹನುಮಂತ ನಾಯಕ್ ಬಾದಾಮಿ,
ಜಿಲ್ಲಾ ಮಹಿಳಾ ಸಂಚಾಲಕಿಯಾದ ಶ್ರೀಮತಿ ದೀಪಾ ಪಾಟೀಲ್, ಸಮ್ಮೇಳನ ಸಮಿತಿಯ ಜಿಲ್ಲಾ ಸಂಘಟಕರಾದ ಶ್ರೀ ಸುಬ್ರಹ್ಮಣ್ಯ ಜಿಲ್ಲಾ ಯುವ ಘಟಕದ ಅಧ್ಯಕ್ಷ ಗಂಗಾಧರ ಕುಲಕರ್ಣಿ ತಾಲೂಕ ಕಾರ್ಯದರ್ಶಿ ದತ್ತಾತ್ರೇಯ ಕಳ್ಳಿಹಾಳ,ರಮೇಶ್ ಕುಲಕರ್ಣಿ ಪ್ರಕಾಶ ಪೂಜಾರ್ ಉಪಸ್ಥಿತರಿದ್ದರು.


