ಹೂವಿನ ಹಡಗಲಿ: ಕನ್ನಡ ಕವಯಿತ್ರಿ ವಿಭಾ ಅವರ ನೆನಪಿನಲ್ಲಿ ವಿಭಾ ಸಾಹಿತ್ಯ ಪ್ರಶಸ್ತಿ-2025
ಕನ್ನಡದ ಕವಿ/ಕವಿಯಿತ್ರಿಯರಿಂದ ಮೂವತ್ತಕ್ಕೂ ಹೆಚ್ಚು, ಐವತ್ತರ ಒಳಗಿರುವ ಸ್ವರಚಿತ ಕವಿತೆಗಳ ಹಸ್ತಪ್ರತಿಗಳನ್ನು ಆಹ್ವಾನಿಸಲಾಗಿದೆ ಎಂದು
ಹುಬ್ಬಳ್ಳಿಯ ನಾಗಸುಧೆಯ
ಹಿರಿಯ ಸಾಹಿತಿ ಪ್ರಕಾಶ ಕಡಮೆ
ತಿಳಿಸಿದ್ದಾರೆ.
ಅನುವಾದಿತ ಕವಿತೆಗಳು ಚುಟುಕು, ಹನಿಗವನಗಳು ಬೇಡ. ಈ ಪ್ರಶಸ್ತಿಯು ರೂ. 1೦,೦೦೦/- ನಗದು ಮತ್ತು ಪ್ರಶಸ್ತಿ ಫಲಕವನ್ನು ಒಳಗೊಂಡಿದೆ.
ಆಸಕ್ತರು ತಮ್ಮ ಹೊಸ ಕವಿತೆಗಳ ಹಸ್ತಪ್ರತಿಯನ್ನು ಸ್ಪರ್ಧೆಗೆ ಕಳುಹಿಸಲು ವಿನಂತಿಸಿದ್ದಾರೆ.
ಯಾವುದೇ ಕಾರಣಕ್ಕೂ ಹಸ್ತಪ್ರತಿಯನ್ನು ಹಿಂದಿರುಗಿಸಲಾಗುವುದಿಲ್ಲ. ಮೇಲ್ ಮೂಲಕ ಕಳಿಸುವದಕ್ಕಿಂತ ಡಿಟಿಪಿ ಮಾಡಿದ ಹಸ್ತಪ್ರತಿ ಕಳಿಸಿಕೊಡಬೇಕು. ಬರವಣಿಗೆ ಮಾಡಿದ ಹಸ್ತಪ್ರತಿಯನ್ನೂ ಕಳಿಸಬಹುದು.
ಹಸ್ತಪ್ರತಿ ಕಳುಹಿಸಲು ಕೊನೆಯ ದಿನಾಂಕ; ಜೂನ್ 3೦ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.


