ಹಗರನೂರು ವಿವಿಧೋದ್ದೇಶ ಪ್ರಾಥಮಿಕ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಎಲ್ ರುದ್ರ ನಾಯ್ಕ್ ಉಪಾಧ್ಯಕ್ಷರಾಗಿ ಹೆದ್ದಾರಿ ಮಲ್ಲಪ್ಪ ಅವಿರೋಧವಾಗಿ ಆಯ್ಕೆ

 ಹಗರನೂರು ವಿವಿಧೋದ್ದೇಶ ಪ್ರಾಥಮಿಕ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಎಲ್ ರುದ್ರ ನಾಯ್ಕ್ ಉಪಾಧ್ಯಕ್ಷರಾಗಿ ಹೆದ್ದಾರಿ ಮಲ್ಲಪ್ಪ ಅವಿರೋಧವಾಗಿ ಆಯ್ಕೆಯಾದರು. ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಇವರಿಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಅವಿರೋಧವಾಗಿ ಅಧ್ಯಕ್ಷ ಉಪಾಧ್ಯಕ್ಷರಾಗಿ ಆಯ್ಕೆಯಾದರು. ಎಲ್. ರುದ್ರ ನಾಯ್ಕ್ ಅವರು ಸಮಾಜ ಸೇವೆಯಿಂದ ಗುರುತಿಸಿಕೊಂಡವರು. ಪ್ರಸ್ತುತ ಹಾಲಿ ಹಗರನೂರು ಗ್ರಾಮ ಪಂಚಾಯತಿಯ ಅಧ್ಯಕ್ಷರು ಕೂಡ ಆಗಿದ್ದಾರೆ. ಸಹಕಾರ ಸಂಘದ ಅಧ್ಯಕ್ಷರಾಗುತ್ತಿರುವುದು ಇದು ಎರಡನೇ ಬಾರಿ. ಅಭಿನಂದನೆ ಶಾಸಕರಾದ ಕೃಷ್ಣ ನಾಯಕ್, … Read more

ಬಳ್ಳಾರಿಯಲ್ಲಿ ಸಂಭ್ರಮದ ಶಿವಯೋಗಿ ಸಿದ್ಧರಾಮೇಶ್ವರ ಜಯಂತ್ಯೋತ್ಸವ ಸಿದ್ದರಾಮೇಶ್ವರರ ಕಾಯಕ ತತ್ವ ಪಾಲಿಸೋಣ: ಮೇಯರ್ ಮುಲ್ಲಂಗಿ ನಂದೀಶ್

ಬಳ್ಳಾರಿ,ಜ.14(ಕರ್ನಾಟಕ ವಾರ್ತೆ): 12 ನೇ ಶತಮಾನದ ವಚನ ಸಾಹಿತ್ಯದ ವಚನಕಾರರಲ್ಲಿ ಒಬ್ಬರಾದ ಶಿವಯೋಗಿ ಶರಣ ಸಿದ್ದರಾಮೇಶ್ವರರ ಕಾಯಕಯೋಗಿ ತತ್ವಗಳನ್ನು ನಾವೆಲ್ಲರೂ ಅಳವಡಿಸಿಕೊಳ್ಳೋಣ ಎಂದು ಮಹಾನಗರ ಪಾಲಿಕೆಯ ಮಹಾಪೌರರಾದ ಮುಲ್ಲಂಗಿ ನಂದೀಶ್ ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಮಂಗಳವಾರ ಆಯೋಜಿಸಿದ್ದ ಶಿವಯೋಗಿ ಸಿದ್ಧರಾಮೇಶ್ವರ 853ನೇ ಜಯಂತಿ ಕಾರ್ಯಕ್ರಮವನ್ನು ಸಿದ್ಧರಾಮೇಶ್ವರರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು. ಸಿದ್ದರಾಮೇಶ್ವರರ … Read more

ಕರ್ನಾಟಕ ಕಾರ್ಯನಿರತ ದಿನ ಪತ್ರಿಕೆಗಳ ಸಂಪಾದಕರ ಸಂಘದ ರಾಜ್ಯ ಕಾರ್ಯಕಾರಿಣಿ ಸಭೆ ಜಾಹೀರಾತು ದರ ಪರಿಷ್ಕರಣೆ ಮಾಡದಿದ್ದರೆ ಹೋರಾಟ ಅನಿವಾರ್ಯ : ರಾಜ್ಯಾಧ್ಯಕ್ಷ ಎ.ಸಿ. ತಿಪ್ಪೇಸ್ವಾಮಿ

ದಾವಣಗೆರೆ : ಜಿಲ್ಲಾ ಮತ್ತು ಪ್ರಾದೇಶಿಕ ಪತ್ರಿಕೆಗಳಿಗೆ ಕಳೆದ ಹಲವು ವರ್ಷಗಳಿಂದ ಬಾಕಿ ಇರುವ ಜಾಹೀರಾತು ದರವನ್ನು ಶೀಘ್ರದಲ್ಲಿಯೇ ಸರಕಾರ ಪರಿಷ್ಕರಣೆ ಮಾಡದಿದ್ದರೆ ಹೋರಾಟ ಅನಿವಾರ್ಯವಾಗಲಿದೆ ಎಂದು ಕರ್ನಾಟಕ ಕಾರ್ಯನಿರತ ದಿನ ಪತ್ರಿಕೆಗಳ ಸಂಪಾದಕರ ಸಂಘದ ರಾಜ್ಯಾಧ್ಯಕ್ಷ ಎ.ಸಿ.ತಿಪ್ಪೇಸ್ವಾಮಿ ಅವರು ತಿಳಿಸಿದರು. ದಾವಣಗೆರೆಯಲ್ಲಿ ಭಂಟರ ಭವನದಲ್ಲಿ ಜನವರಿ 12 ರ ಭಾನುವಾರ ನಡೆದ ಕರ್ನಾಟಕ ಕಾರ್ಯನಿರತ ದಿನ ಪತ್ರಿಕೆಗಳ ಸಂಪಾದಕರ ಸಂಘದ ರಾಜ್ಯ ಕಾರ್ಯಕಾರಿಣಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಾಹೀರಾತು ನೀತಿ 2013 ಅನುಷ್ಠಾನ … Read more